1. ಎಲ್ಲಾ ಪ್ರಮುಖ ಬ್ಯಾಂಕ್‌ಗಳಲ್ಲಿ ಒದಗಿಸುತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ತಿಳಿಸಿದೆ.
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ)
ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ವಾರ್ಷಿಕ ರೂ.436/-ಗಳ ಪ್ರೀಮಿಯಂ ಪಾವತಿಸುವುದು (ಪ್ರೀಮಿಯಂ ವಿಮಾದಾರರ ಬ್ಯಾಂಕ್ ಖಾತೆಯ ಮೂಲಕ ಪಾವತಿಸಲ್ಪಡುತ್ತದೆ) ಯಾವುದೇ ಕಾರಣದಿಂದ ಮರಣ ಸಂಭವಿಸಿದರೆ ಅವಲಂಬಿತ ಕುಟುಂಬ ಸದಸ್ಯರಿಗೆ ರೂ. 2.00 ಲಕ್ಷಗಳ ವಿಮಾ ಮೊತ್ತದ ನರೆವು. ಈ ಯೋಜನೆಯು 18 ರಿಂದ 50 ವರ್ಷದೊಳಗಿನ ಜನರಿಗೆ ಮಾತ್ರ ಲಭ್ಯವಿರುತ್ತದೆ.ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ)
ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಇದು ಅಪಘಾತ ವಿಮಾ ಯೋಜನೆಯಾಗಿದ್ದು, ವಾರ್ಷಿಕ ರೂ. 20/-ಗಳ ಪ್ರೀಮಿಯಂ ಪಾವತಿಸುವುದು (ಪ್ರೀಮಿಯಂ ವಿಮಾದಾರರ ಬ್ಯಾಂಕ್ ಖಾತೆಯ ಮೂಲಕ ಪಾವತಿಸಲ್ಪಡುತ್ತದೆ). ಒಂದು ವೇಳೆ ಅಪಘಾತವಾಗಿ ಮೃತಪಟ್ಟರೆ ಅಥವಾ ಶಾಶ್ವತ ಒಟ್ಟು ಅಂಗವೈಕಲ್ಯಕ್ಕೆ ರೂ. 2.00ಲಕ್ಷಗಳು ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ ರೂ.1.00 ಲಕ್ಷಗಳ ವಿಮಾ ಮೊತ್ತದ ನರೆವು ಈ ಯೋಜನೆಯು 18 ರಿಂದ 70 ವರ್ಷದೊಳಗಿನ ಜನರಿಗೆ ಮಾತ್ರ ಲಭ್ಯವಿರುತ್ತದೆ. ಇವೆರಡು ಭಿಮಾ ಯೋಜನೆಗಳು ನಿಮ್ಮ ಕುಟುಂಬಕ್ಕೆ ಬಹಳ ಉಪಯುಕ್ತವಾಗುವುದು.3. ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:02/11/2023 ರನ್ವಯ, ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ವಿಮಾ ವಿವರಗಳನ್ನು ಹೆಚ್‌ಆರ್‌ಎಂಎಸ್ ಇಎಸ್‌ಎಸ್ ಲಾಗಿನ್ https://hrmsess.karnataka.gov.in ನ ಪೋರ್ಟಲ್‌ನಲ್ಲಿ ದಾಖಲಿಸಲು ಸೂಚಿಸಲಾಗಿದೆ. ಅದರಂತೆ ಪ್ರತಿ ಸಿಬ್ಬಂದಿಗಳು ಹಾಗೂ ಡಿಡಿಓಗಳು ಈ ಯೋಜನೆಯನ್ನು ಖಚಿತವಾಗಿ ಪಡೆದುಕೊಳ್ಳುವುದು ಹಾಗು ಇಎಸ್‌ಎಸ್ ಪೋರ್ಟಲ್‌ನಲ್ಲಿ ಈ ದಾಖಲೆಯನ್ನು ನವೀಕರಿಸುವುದು ಅವರ ಜವಾಬ್ದಾರಿಯಾಗಿರುತ್ತದೆ. ಸದರಿ ಪ್ರಗತಿಯನ್ನು ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆರವರು ವೀಕ್ಷಿಸುತ್ತಿರುತ್ತಾರೆ.
4. ದಯವಿಟ್ಟು ತಮ್ಮ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಫಲಾನುಭವಿಗಳನ್ನು ಅಪ್‌ಡೇಟ್ ಮಾಡಿದ್ದಲ್ಲಿ ಮಾತ್ರ ಯೋಜನೆಯ ಸದುಪಯೋಗವನ್ನು ಸಿಬ್ಬಂದಿಗಳು ಹಾಗೂ ಅವರ ಕುಟುಂಬವು ಪಡೆಯಬಹುದು.
5. ಎಲ್ಲಾ ಉದ್ಯೋಗಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ತಮ್ಮದೇ ಆದ ಪಾವತಿ ಚೀಟಿ, ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾದ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಬೇಕು. ತಮ್ಮ ಎಲ್ಲಾ ಉದ್ಯೋಗಿಗಳು 1ನೇ ಜನವರಿ 2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ.
No comments:
Post a Comment