LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

28 January 2026

ಅಧಿಕಾರಿಗಳ ವಿರುದ್ಧದ ಅಕ್ರಮ ಪ್ರಕರಣಗಳ ವಿಚಾರಣೆಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪನೆಗೆ ಚಿಂತನೆ?

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇಂತಹ ಪ್ರಕರಣಗಳಿಗಾಗಿಯೇ ಪ್ರತ್ಯೇಕ ತರಿತ ನ್ಯಾಯಾಲಯ (Fast-track Court) ಸ್ಥಾಪಿಸುವ ಕುರಿತು ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.

​ಪ್ರಮುಖಾಂಶಗಳು:

  • ವಿಚಾರಣೆಯಲ್ಲಿ ವಿಳಂಬ ತಡೆ: ಅಧಿಕಾರಿಗಳ ವಿರುದ್ಧದ ಆರೋಪಗಳ ತನಿಖೆ ಮತ್ತು ವಿಚಾರಣೆಗಳು ವರ್ಷಗಟ್ಟಲೆ ವಿಳಂಬವಾಗುವುದನ್ನು ತಪ್ಪಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮಾದರಿಯಲ್ಲೇ ಪ್ರತ್ಯೇಕ ಕೋರ್ಟ್ ಸ್ಥಾಪಿಸಲು ಸರ್ಕಾರ ಮುಂದಾಗಿದೆ.
  • ಪ್ರಶ್ನೋತ್ತರ ಕಲಾಪ: ಬಿಜೆಪಿಯ ವೈ. ಎಂ. ಸತೀಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
  • ಬಳ್ಳಾರಿ ಪಾಲಿಕೆಯಲ್ಲಿ ಕ್ರಮ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಫ್ಲ್ಯಾಟ್‌ಗಳ ಆಸ್ತಿ ತೆರಿಗೆಯನ್ನು ಸಂಗ್ರಹಿಸಿ ಪಾಲಿಕೆಯ ಖಾತೆಗೆ ಜಮೆ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗಿದೆ. ಅಂತಹ ಅಧಿಕಾರಿಗಳನ್ನು ನಿಯಮಾನುಸಾರ 6 ತಿಂಗಳ ಕಾಲ ಅಮಾನತು ಮಾಡಲಾಗಿದ್ದು, ನಿವೃತ್ತ ನ್ಯಾಯಾಧೀಶರಿಂದ ಈ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
  • ​"ಅಧಿಕಾರಿಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ವಿಚಾರಣೆ ವಿಳಂಬವಾಗಬಾರದು ಎಂಬುದು ಸರ್ಕಾರದ ಉದ್ದೇಶ." - ಬೈರತಿ ಸುರೇಶ್, ನಗರಾಭಿವೃದ್ಧಿ ಸಚಿವರು.

No comments:

Post a Comment