LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

25 January 2026

ಶಾಲಾ-ಕಾಲೇಜು ಕಾರ್ಯಕ್ರಮಗಳಲ್ಲಿ ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಸರ್ಕಾರದಿಂದ ಹೊಸ ಸುತ್ತೋಲೆ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬಗಳು, ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭದಲ್ಲಿ ಮಕ್ಕಳ ಮತ್ತು ಸಾರ್ವಜನಿಕರ ರಕ್ಷಣೆಗಾಗಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ಸರ್ಕಾರವು ಆದೇಶಿಸಿದೆ. ಇತ್ತೀಚಿನ ದಿನಗಳಲ್ಲಿ ಸಂಭವಿಸಬಹುದಾದ ಅನಿರೀಕ್ಷಿತ ಅವಘಡಗಳನ್ನು ತಡೆಗಟ್ಟಲು ಈ ಕ್ರಮ ಅನಿವಾರ್ಯ ಎಂದು ಸರ್ಕಾರ ತಿಳಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 23.01.2026 ರಂದು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದು, ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಗಳು ಈ ಕೆಳಗಿನ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಿದೆ.

ಪ್ರಮುಖ ಮಾರ್ಗಸೂಚಿಗಳು:

  • ಧ್ವಜಾರೋಹಣ ಸಂದರ್ಭದಲ್ಲಿ ಎಚ್ಚರಿಕೆ: ಧ್ವಜಸ್ತಂಭದ ಬಳಿ ಯಾವುದೇ ವಿದ್ಯುತ್ ತಂತಿಗಳು ಹಾದುಹೋಗದಂತೆ ಗಮನಹರಿಸಬೇಕು. ಧ್ವಜವನ್ನು ಏರಿಸಲು ಅಥವಾ ಇಳಿಸಲು ಮಕ್ಕಳನ್ನು ಬಳಸಬಾರದು ಮತ್ತು ಧ್ವಜ ಸಿಕ್ಕಿಕೊಂಡರೆ ಮಕ್ಕಳನ್ನು ಕಂಬ ಹತ್ತಿಸಬಾರದು.

  • ವಿದ್ಯುತ್ ಸುರಕ್ಷತೆ: ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವಿದ್ಯುತ್ ತಂತಿಗಳಿಂದ ವಿದ್ಯುತ್ ಪ್ರವಹಿಸದಂತೆ ಮತ್ತು ಅವು ಮಕ್ಕಳ ಸಂಪರ್ಕಕ್ಕೆ ಬಾರದಂತೆ ತಜ್ಞರ ಮೂಲಕ ಪರಿಶೀಲಿಸಬೇಕು. ಮಳೆ ನೀರು ವಿದ್ಯುತ್ ಸಂಪರ್ಕದ ಮೇಲೆ ಬೀಳದಂತೆ ಜಾಗ್ರತೆ ವಹಿಸಬೇಕು.

  • ವಾಹನಗಳ ಪರಿಶೀಲನೆ: ಮಕ್ಕಳನ್ನು ಕರೆದೊಯ್ಯುವ ವಾಹನಗಳು ಸುಸ್ಥಿತಿಯಲ್ಲಿರಬೇಕು. ಚಾಲಕರು ಮದ್ಯಪಾನ ಮಾಡಿರಬಾರದು ಮತ್ತು ನಿಗದಿತ ವೇಗಮಿತಿಯಲ್ಲಿ ಚಲಿಸಬೇಕು. ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಏರಿಸುವಂತಿಲ್ಲ.

  • ಆಹಾರ ಮತ್ತು ನೀರಿನ ಶುಚಿತ್ವ: ಮಕ್ಕಳಿಗೆ ನೀಡುವ ಆಹಾರ, ಪಾನೀಯ ಮತ್ತು ನೀರಿನ ಗುಣಮಟ್ಟವನ್ನು ಸಂಯೋಜಕರು ಖತರಿಪಡಿಸಿಕೊಂಡ ನಂತರವೇ ವಿತರಿಸಬೇಕು. ಅಡುಗೆ ಮಾಡುವ ಸ್ಥಳಕ್ಕೆ ಮಕ್ಕಳ ಪ್ರವೇಶ ನಿರ್ಬಂಧಿಸಬೇಕು.

  • ತುರ್ತು ಸಿದ್ಧತೆ: ಅನಿರೀಕ್ಷಿತ ಘಟನೆಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ತರಬೇತಿ ನೀಡಬೇಕು. ಕಾರ್ಯಕ್ರಮದ ಬಗ್ಗೆ ಸ್ಥಳೀಯ ಪೊಲೀಸ್, ಅಗ್ನಿಶಾಮಕ ದಳ ಮತ್ತು ವೈದ್ಯಕೀಯ ಕೇಂದ್ರಗಳಿಗೆ ಮುಂಚಿತವಾಗಿ ಮಾಹಿತಿ ನೀಡುವುದು ಕಡ್ಡಾಯವಾಗಿದೆ.

ಸ್ಥಳೀಯ ಆಡಳಿತಗಳು ಮತ್ತು ಶಾಲಾ ಅಭಿವೃದ್ಧಿ ಸಮಿತಿಗಳು (SDMC) ಈ ಕಾರ್ಯಕ್ರಮಗಳ ಮೇಲ್ವಿಚಾರಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸರ್ಕಾರ ನಿರ್ದೇಶಿಸಿದೆ. ಈ ನಿಯಮಗಳ ಪಾಲನೆಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಆಯಾ ಶಾಲಾ ಆಡಳಿತ ಮಂಡಳಿಯೇ ಜವಾಬ್ದಾರರಾಗಬೇಕಾಗುತ್ತದೆ ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.

No comments:

Post a Comment