LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

27 February 2026

ಶಿಕ್ಷಣ ಇಲಾಖೆ ನೇಮಕಾತಿ ನಿಯಮಕ್ಕೆ ತಿದ್ದುಪಡಿ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಬಡ್ತಿ ಅನುಪಾತದಲ್ಲಿ ಬದಲಾವಣೆ?

ಬೆಂಗಳೂರು: ಕರ್ನಾಟಕ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಸೇವೆಗಳ ನೇಮಕಾತಿ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದಿದ್ದು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ನೇಮಕಾತಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಫೆಬ್ರವರಿ 27, 2026 ರಂದು ಹೊರಡಿಸಲಾದ ಈ ಹೊಸ ಅಧಿಸೂಚನೆಯು ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದಲೇ ಜಾರಿಗೆ ಬರಲಿದೆ.

ಪ್ರಮುಖ ಬದಲಾವಣೆಗಳು:
  • ಬಡ್ತಿ ಅನುಪಾತ (2:1): ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5ನೇ ತರಗತಿ) ಮತ್ತು ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ) ವೃಂದದಿಂದ 2:1ರ ಅನುಪಾತದಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಲಾಗುವುದು.

  • 3ನೇ ರಿಕ್ತಸ್ಥಾನದ ನಿಯಮ: ಪ್ರತಿ 3ನೇ ಖಾಲಿ ಇರುವ ಮುಖ್ಯ ಶಿಕ್ಷಕರ ಹುದ್ದೆಯನ್ನು ಕಡ್ಡಾಯವಾಗಿ ಪದವೀಧರ ಪ್ರಾಥಮಿಕ ಶಿಕ್ಷಕರಿಂದ (GPT) ತುಂಬತಕ್ಕದ್ದು ಎಂದು ನಿಯಮದಲ್ಲಿ ಸ್ಪಷ್ಟಪಡಿಸಲಾಗಿದೆ.

  • ಸೇವಾ ಅವಧಿ: ಮುಂಬಡ್ತಿ ಪಡೆಯಲು ಪ್ರಾಥಮಿಕ ಶಾಲಾ ಶಿಕ್ಷಕರು ಅಥವಾ ಪದವೀಧರ ಪ್ರಾಥಮಿಕ ಶಿಕ್ಷಕರು ತಮ್ಮ ಆಯಾ ವೃಂದದಲ್ಲಿ ಕನಿಷ್ಠ 12 ವರ್ಷಗಳ ಸೇವೆಯನ್ನು ಪೂರೈಸಿರಬೇಕು.

  • ಅಭಿಮತ ಸಲ್ಲಿಕೆ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಅಥವಾ ಪ್ರೌಢಶಾಲಾ ಸಹಶಿಕ್ಷಕ ಹುದ್ದೆಗಳಿಗೆ ಮುಂಬಡ್ತಿ ನೀಡುವ ಮೊದಲು ಶಿಕ್ಷಕರಿಂದ ಹಿಂದಕ್ಕೆ ಪಡೆಯಲಾಗದ (Irrevocable) ಅಭಿಮತವನ್ನು ಪಡೆಯುವುದು ಕಡ್ಡಾಯವಾಗಿದೆ.

  • ಅರ್ಹತೆ ಮತ್ತು ಪರ್ಯಾಯ ವ್ಯವಸ್ಥೆ:

  • ಬೋಧನಾ ಅರ್ಹತೆ: 1 ರಿಂದ 5ನೇ ತರಗತಿಯ ಶಿಕ್ಷಕರು ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದರೆ ಹಾಗೂ NCTE ಮಾರ್ಗಸೂಚಿಗಳನ್ನು ಪೂರೈಸಿದ್ದಲ್ಲಿ, ಅವರು 6 ಮತ್ತು 7ನೇ ತರಗತಿಗಳಿಗೆ ಬೋಧಿಸಲು ಅರ್ಹರಾಗುತ್ತಾರೆ.

  • ಜೇಷ್ಠತೆ ಆಧರಿಸಿದ ಬಡ್ತಿ: ಒಂದು ವೇಳೆ ನಿಗದಿತ ಅನುಪಾತದಡಿ ಅರ್ಹ ಶಿಕ್ಷಕರು ಲಭ್ಯವಿಲ್ಲದಿದ್ದರೆ ಅಥವಾ ಶಿಕ್ಷಕರು ಬಡ್ತಿ ನಿರಾಕರಿಸಿದರೆ, ಆಡಳಿತಾತ್ಮಕ ಹಿತದೃಷ್ಟಿಯಿಂದ ಜೇಷ್ಠತೆಯ ಆಧಾರದ ಮೇಲೆ ಲಭ್ಯವಿರುವ ಇನ್ನೊಂದು ವೃಂದದ ಶಿಕ್ಷಕರನ್ನು ಪರಿಗಣಿಸಲಾಗುತ್ತದೆ. ಹೀಗೆ ನಷ್ಟವಾದ ಹುದ್ದೆಗಳನ್ನು ಮುಂದಿನ ಬಡ್ತಿ ಸಂದರ್ಭದಲ್ಲಿ ಸರಿದೂಗಿಸಲಾಗುವುದು.

  • ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಹೊರಡಿಸಿದ್ದಾರೆ.

No comments:

Post a Comment