LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

22 April 2026

ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ: ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 24 ಕೊನೆಯ ದಿನ

ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು 1993ರ ಅಧಿನಿಯಮದ ಅಡಿಯಲ್ಲಿ ತನಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಜಿಲ್ಲಾವಾರು ಸದಸ್ಯ ಸ್ಥಾನಗಳ ವಿವರ:

ಅಧಿಸೂಚನೆಯಲ್ಲಿ ಪ್ರತಿ ಜಿಲ್ಲೆಯ ತಾಲ್ಲೂಕುವಾರು ಗ್ರಾಮ ಪಂಚಾಯಿತಿಗಳ ಸಂಖ್ಯೆ ಮತ್ತು ಒಟ್ಟು ಸದಸ್ಯ ಸ್ಥಾನಗಳನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ:

  • ಬೆಂಗಳೂರು ನಗರ ಜಿಲ್ಲೆ: 5 ತಾಲ್ಲೂಕುಗಳ 85 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2,047 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಕಲಬುರಗಿ ಜಿಲ್ಲೆ: 11 ತಾಲ್ಲೂಕುಗಳ 260 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 4,429 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಕೊಪ್ಪಳ ಜಿಲ್ಲೆ: 7 ತಾಲ್ಲೂಕುಗಳ 152 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2,721 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಕೋಲಾರ ಜಿಲ್ಲೆ: 6 ತಾಲ್ಲೂಕುಗಳ 154 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2,747 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಚಿಕ್ಕಬಳ್ಳಾಪುರ ಜಿಲ್ಲೆ: 8 ತಾಲ್ಲೂಕುಗಳ 154 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2,451 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಚಿತ್ರದುರ್ಗ ಜಿಲ್ಲೆ: 6 ತಾಲ್ಲೂಕುಗಳ 188 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 3,404 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ತುಮಕೂರು ಜಿಲ್ಲೆ: 10 ತಾಲ್ಲೂಕುಗಳ 329 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 5,338 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ದಾವಣಗೆರೆ ಜಿಲ್ಲೆ: 6 ತಾಲ್ಲೂಕುಗಳ 194 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 2,662 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಬಳ್ಳಾರಿ ಜಿಲ್ಲೆ: 5 ತಾಲ್ಲೂಕುಗಳ 100 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 1,977 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

  • ಬೆಂಗಳೂರು ಗ್ರಾಮಾಂತರ ಜಿಲ್ಲೆ: 4 ತಾಲ್ಲೂಕುಗಳ 107 ಗ್ರಾಮ ಪಂಚಾಯಿತಿಗಳಿಗೆ ಒಟ್ಟು 1,887 ಸದಸ್ಯ ಸ್ಥಾನಗಳನ್ನು ನಿಗದಿಪಡಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ:

ಈ ಕರಡು ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಸದಸ್ಯರ ಸಂಖ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

  • ಕೊನೆಯ ದಿನಾಂಕ: ಏಪ್ರಿಲ್ 24, 2026, ಸಂಜೆ 5.00 ಗಂಟೆಯೊಳಗೆ.

  • ಸಲ್ಲಿಸುವ ವಿಧಾನ: ಆನ್‌ಲೈನ್ ಮೂಲಕ (https://rdpr.karnataka.gov.in/rdc/public/) ಅಥವಾ ಬೆಂಗಳೂರಿನಲ್ಲಿರುವ ಸೀಮಾ ನಿರ್ಣಯ ಆಯೋಗದ ಕಚೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

ಪರಿಶೀಲನಾ ಅದಾಲತ್: ಸಲ್ಲಿಸಲಾದ ಆಕ್ಷೇಪಣೆಗಳ ಪರಿಶೀಲನೆಗಾಗಿ ಏಪ್ರಿಲ್ 27, 2026 ರಂದು ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:30 ರವರೆಗೆ ಬೆಂಗಳೂರಿನ ಬಹುಮಹಡಿಗಳ ಕಟ್ಟಡದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಯಲ್ಲಿ ಅದಾಲತ್ ನಡೆಯಲಿದೆ. ಭಾಗವಹಿಸುವವರು ಸರ್ಕಾರಿ ಗುರುತಿನ ಚೀಟಿಯ ಮೂಲ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ

No comments:

Post a Comment