ರಾಜ್ಯದ PDO ಅವರಿಗೆ ಇನ್ನು ಮುಂದೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿ ಕಡ್ಡಾಯ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಸರ್ಕಾರವು ವೇತನದ ವಿಚಾರದಲ್ಲಿ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಅಧಿಕಾರಿಗಳು ವೇತನಕ್ಕಾಗಿ ಕಾಯುವಂತಿಲ್ಲ.
"ಯಾವುದೇ ತಾಂತ್ರಿಕ ಕಾರಣ ನೀಡದೆ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವೇತನವನ್ನು ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು."
ಯಾವುದೇ ಕಾರಣವಿಲ್ಲದೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರತಿ ತಿಂಗಳ ಮೊದಲ ವಾರದೊಳಗೆ ವೇತನ ಪಾವತಿಸಬೇಕೆಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘ(ರಿ) ಬೆಂಗಳೂರು ರವರು ಕೋರಿದ ಹಿನ್ನಲೆಯಲ್ಲಿ, ಆಯುಕ್ತಾಲಯ ಈ ಆದೇಶ ಹೊರಡಿಸಿದೆ, ಪ್ರಮುಖವಾಗಿ ಈ ಕೆಳಗಿನ ಅಂಶಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ:
ವಿಳಂಬಕ್ಕೆ ಬ್ರೇಕ್: ಅನಗತ್ಯವಾಗಿ ವೇತನ ತಡೆಹಿಡಿಯುವ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಜಿಪಂ ಸಿಇಒ ಅವರಿಗೆ ಜವಾಬ್ದಾರಿ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.
ಈ ಹೊಸ ಆದೇಶದಿಂದಾಗಿ ರಾಜ್ಯದ ಸಾವಿರಾರು ಪಿಡಿಒ ಅವರಿಗೆ ಅನುಕೂಲವಾಗಲಿದ್ದು, ಆರ್ಥಿಕ ಭದ್ರತೆ ಮತ್ತು ಸಮಯಕ್ಕೆ ಸರಿಯಾಗಿ ವೇತನ ಸಿಗುವಂತಾಗಿದೆ.
ಮಾಹಿತಿ ಕೃಪೆ: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ
No comments:
Post a Comment