ಬೆಂಗಳೂರು: ರಾಜ್ಯದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಹಾಗೂ ಮುಂಬರುವ ಬೇಸಿಗೆಯ ಸವಾಲುಗಳನ್ನು ಎದುರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ಮಹತ್ವದ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಚರ್ಚಿಸಿದ ಸಿಎಂ, ನೀರಿನ ಅಭಾವ ನೀಗಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದಾರೆ.
ಮುಂಗಾರು ಕೊರತೆಯ ಮುನ್ಸೂಚನೆ: ಎಚ್ಚರಿಕೆ ವಹಿಸಲು ಸೂಚನೆ
ಹವಾಮಾನ ಇಲಾಖೆಯ ವರದಿಯಂತೆ ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಇರಲಿದ್ದು, ಬಿಸಿ ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
- ಹಣಕಾಸು ಲಭ್ಯತೆ: ಕುಡಿಯುವ ನೀರು ಪೂರೈಕೆಗಾಗಿ ಜಿಲ್ಲಾಧಿಕಾರಿಗಳ ಪಿಡಿ (PD) ಖಾತೆಯಲ್ಲಿ ಒಟ್ಟು ₹419.50 ಕೋಟಿ ಹಣ ಲಭ್ಯವಿದ್ದು, ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಆದೇಶಿಸಲಾಗಿದೆ.
- ಪರ್ಯಾಯ ವ್ಯವಸ್ಥೆ:ನೀರಿನ ಮೂಲಗಳ ವೃದ್ಧಿಗಾಗಿ ಕೊಳವೆ ಬಾವಿಗಳ ಫ್ಲಶಿಂಗ್, ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯುವುದು ಹಾಗೂ ಅನಿವಾರ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಸಲು ಅನುಮತಿ ನೀಡಲಾಗಿದೆ.
- ಟಾಸ್ಕ್ ಫೋರ್ಸ್ ಅನುಮೋದನೆ:ಯಾವುದೇ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ಟಾಸ್ಕ್ ಫೋರ್ಸ್ ಮೂಲಕವೇ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು.
- ಪಾರದರ್ಶಕತೆ: ನೀರಿನ ಸ್ಥಿತಿಗತಿ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಪ್ರತಿ 10 ದಿನಗಳಿಗೊಮ್ಮೆ ಪತ್ರಿಕಾ ಪ್ರಕಟಣೆ ಹೊರಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
- ಸಹಾಯವಾಣಿ ಮೇಲ್ವಿಚಾರಣೆ: ಸಹಾಯವಾಣಿಗಳ ಕುರಿತು ಬರುತ್ತಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ, ಜಿಲ್ಲಾ ಪಂಚಾಯತ್ ಸಿಇಒಗಳು ವೈಯಕ್ತಿಕವಾಗಿ ಇದರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕೆಂದು ಸೂಚಿಸಿದ್ದಾರೆ.
ಗ್ರಾಮ ಪಂಚಾಯಿತಿಗಳ ದಾಖಲೆ ಮಟ್ಟದಲ್ಲಿ ತೆರಿಗೆ ಸಂಗ್ರಹ: ZP CEO ಅವರಿಗೆ ಅಭಿನಂದನೆ!
- ಇದೇ ಸಂದರ್ಭದಲ್ಲಿ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ₹1,387 ಕೋಟಿ ದಾಖಲೆ ತೆರಿಗೆ ಸಂಗ್ರಹ ಮಾಡಿರುವ ಜಿಲ್ಲಾ ಪಂಚಾಯತ್ ಸಿಇಒಗಳ ಕಾರ್ಯವೈಖರಿಯನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು. "ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತವಾಗದೆ ಜನಸ್ನೇಹಿಯಾಗಿ ಮತ್ತು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು" ಎಂದು ಅವರು ಕರೆ ನೀಡಿದರು.
- ಮುಖ್ಯ ಅಂಶ:ರಾಜ್ಯದ ಯಾವುದೇ ಮೂಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದ್ದು, ಹಣದ ಕೊರತೆಯಿಲ್ಲ ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು.
- ವರದಿ ಸಂಗ್ರಹ: ಕರ್ನಾಟಕ ರಾಜ್ಯ PDO ಬಿ ಗ್ರೇಡ್ ಹುದ್ದೆ ಉನ್ನತೀಕರಣ ಸಂಘ(ರಿ)ಬೆಂಗಳೂರು
No comments:
Post a Comment