LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

17 April 2026

ಕುಡಿಯುವ ನೀರಿನ ಬಿಕ್ಕಟ್ಟು: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ!

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪ ತೀವ್ರಗೊಳ್ಳುತ್ತಿದ್ದಂತೆ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ಕರೆದು ಸ್ಥಿತಿಗತಿಯ ಸಮೀಕ್ಷೆ ನಡೆಸಿ, ಸಮಸ್ಯೆ ನಿವಾರಣೆಗೆ ಸರಣಿ ನಿರ್ದೇಶನಗಳನ್ನು ನೀಡಿದ್ದಾರೆ.
ಎಷ್ಟು ಗ್ರಾಮಗಳು ಸಂಕಷ್ಟದಲ್ಲಿ?
  • ರಾಜ್ಯದಲ್ಲಿ ಪ್ರಸ್ತುತ 213 ತಾಲೂಕುಗಳು ಮತ್ತು 2,410 ಗ್ರಾಮ ಪಂಚಾಯತ್‌ಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಬಹುದಾದ ಸಾಧ್ಯತೆ ಇದೆ.
  • ಈಗಾಗಲೇ 114 ತಾಲೂಕುಗಳ 598 ಗ್ರಾಮ ಪಂಚಾಯತ್‌ಗಳಲ್ಲಿ ನೀರಿನ ಅಭಾವ ತಲೆದೋರಿದೆ. 
  • 137 ಗ್ರಾಮಗಳಿಗೆ 129 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದು, 585 ಖಾಸಗಿ ಬೋರ್‌ವೆಲ್‌ಗಳ ಮೂಲಕ 515 ಗ್ರಾಮಗಳಿಗೆ ನೀರು ನೀಡಲಾಗುತ್ತಿದೆ.
  • ಕಲಬುರಗಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಮಂಡ್ಯ, ಕುಮಕೂರು ಮತ್ತು ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಗ್ರಾಮ ಪಂಚಾಯತ್‌ಗಳಲ್ಲಿ ಸ್ಥಿತಿ ಗಂಭೀರವಾಗಿದೆ. 
  • ನಗರ ಪ್ರದೇಶಗಳಲ್ಲೂ 95 ಸ್ಥಳೀಯ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದು ಎಂದು ಅಂದಾಜಿಸಲಾಗಿದೆ.

ಮುಖ್ಯಮಂತ್ರಿ ನೀಡಿದ ಪ್ರಮುಖ ನಿರ್ದೇಶನಗಳು
  • ಮಳೆ ತಡವಾಗಿ ಆರಂಭವಾಗುವ ಸಾಧ್ಯತೆ ಇರುವುದರಿಂದ ಜುಲೈ ಮಧ್ಯದವರೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಸಂಗ್ರಹ ಖಾತ್ರಿಪಡಿಸಿಕೊಳ್ಳಬೇಕು ಎಂದು ಅವರು ತಾಕೀತು ಮಾಡಿದ್ದಾರೆ. 
  • ನೀರಾವರಿ ಬಳಕೆಗಿಂತ ಕುಡಿಯುವ ನೀರಿಗೆ ಅಗ್ರಾಧಿಕಾರ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
  • ಸಾರ್ವಜನಿಕ ದೂರುಗಳಿಗೆ ತ್ವರಿತ ಸ್ಪಂದನೆ ನೀಡಲು ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. 
  • ಎಲ್ಲಾ ಆರ್‌ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.
  • ರಸಗೊಬ್ಬರ ವಿತರಣೆಯಲ್ಲಿ ತೊಂದರೆ ಆಗದಂತೆ ನಿಗಾ ವಹಿಸಬೇಕು ಮತ್ತು ಇತರ ರಾಜ್ಯಗಳಿಗೆ ರಸಗೊಬ್ಬರ ಸಾಗಣೆ ನಿಯಂತ್ರಿಸಲು ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು ಎಂದು ಸೂಚಿಸಿದ್ದಾರೆ. 
  • ಈ ಬಾರಿ ಏಪ್ರಿಲ್-ಜೂನ್ ಅವಧಿಯಲ್ಲಿ ಹೆಚ್ಚಿನ ಬಿಸಿಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಮುನ್ಸೂಚನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದ್ದಾರೆ.
ಜಿಲ್ಲಾಧಿಕಾರಿಗಳ ಹೊಣೆಗಾರಿಕೆ
  • ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು. 
  • ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು ಎಂದು ಮುಖ್ಯಮಂತ್ರಿ ಒತ್ತಿ ಹೇಳಿದ್ದಾರೆ. 
  • ಕುಡಿಯುವ ನೀರು ಸಮಸ್ಯೆ ನಿಯಂತ್ರಣಕ್ಕಾಗಿ ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಇದನ್ನು ಜಿಲ್ಲಾಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಅವರೇ ನೇರ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
  • ಕೇಂದ್ರ ಹವಾಮಾನ ಇಲಾಖೆ ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಕಡಿಮೆ ನಿರೀಕ್ಷಿಸಬಹುದು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

No comments:

Post a Comment