LIVE

ಸುದ್ದಿ
ಮಾಹಿತಿ ಸಿದ್ಧವಾಗುತ್ತಿದೆ...

MENU BAR

ಸಂಘ
ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಬಿ-ಗ್ರೇಡ್ ಹುದ್ದೆ ಉನ್ನತೀಕರಣ ಸಂಘ (ರಿ), ಬೆಂಗಳೂರು Reg No: DRB4/SOR/420/2023-24 ಇದು 1960ರ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮದಡಿ ನೋಂದಾಯಿಸಲ್ಪಟ್ಟ ಅಧಿಕೃತ ಸಂಘ. Registered under Karnataka Co-operative Societies Act, 1960. ರಾಜ್ಯಾಧ್ಯಕ್ಷರು: ಶ್ರೀ ರಮೇಶ ನಡಗೇರಿ ರಾಜ್ಯ ಉಪಾಧ್ಯಕ್ಷರು: ಶ್ರೀ ಜಯಗೌಡ ಪಾಟಿಲ್ ಮಹಿಳಾ ಉಪಾಧ್ಯಕ್ಷರು: ಶ್ರೀದೇವಿ ಮಡಿವಾಳರ

13 February 2026

ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ: ಇಲಾಖಾ ಮುಂಬಡ್ತಿ ಸಮಿತಿ ಸಭೆ ಕಡ್ಡಾಯ – ಸರ್ಕಾರದ ಹೊಸ ಸುತ್ತೋಲೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಸರ್ಕಾರಿ ನೌಕರರಿಗೆ ಸಕಾಲದಲ್ಲಿ ಮುಂಬಡ್ತಿ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕರ್ನಾಟಕ ಸರ್ಕಾರವು ಮಹತ್ವದ ಸೂಚನೆ ನೀಡಿದೆ. ಇಲಾಖಾ ಮುಂಬಡ್ತಿ ಸಮಿತಿಗಳು (DPC) ಇನ್ನು ಮುಂದೆ ಕನಿಷ್ಠ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಬೇಕು ಎಂದು ಸರ್ಕಾರ ಆದೇಶಿಸಿದೆ.ಮುಂಬಡ್ತಿ ವಿಳಂಬಕ್ಕೆ ಸರ್ಕಾರದ ಗರಂ


ಜೇಷ್ಠತೆ ಮತ್ತು ಅರ್ಹತೆಯ ಆಧಾರದ ಮೇಲೆ (Seniority-cum-merit) ನೌಕರರಿಗೆ ನೀಡಬೇಕಾದ ಮುಂಬಡ್ತಿ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆಯೇ ಹಲವು ಬಾರಿ ಸೂಚನೆಗಳನ್ನು ನೀಡಿದ್ದರೂ, ಕೆಲವು ನೇಮಕಾತಿ ಪ್ರಾಧಿಕಾರಗಳು ನಿಯಮಿತವಾಗಿ ಸಭೆ ನಡೆಸುತ್ತಿಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದಾಗಿ ಅರ್ಹ ನೌಕರರಿಗೆ ಸಕಾಲದಲ್ಲಿ ಪ್ರಮೋಷನ್ ಸಿಗದೆ ಅನ್ಯಾಯವಾಗುತ್ತಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹೊಸ ಮಾರ್ಗಸೂಚಿಗಳ ಮುಖ್ಯಾಂಶಗಳು:

ಸುತ್ತೋಲೆಯ ಪ್ರಕಾರ, ಇಲಾಖಾ ಮುಂಬಡ್ತಿ ಸಮಿತಿಗಳು ಈ ಕೆಳಗಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ:

  • ನಿಯಮಿತ ಸಭೆಗಳು: ರಿಕ್ತಸ್ಥಾನಗಳ (vacancies) ಲಭ್ಯತೆಯನ್ನು ಆಧರಿಸಿ, ಕನಿಷ್ಠ 6 ತಿಂಗಳಿಗೊಮ್ಮೆ ಸಭೆಗಳನ್ನು ನಡೆಸತಕ್ಕದ್ದು.

  • ಮುನ್ಸೂಚನೆ (Forecast): ಮುಂದಿನ ಒಂದು ವರ್ಷದಲ್ಲಿ ಉದ್ಭವಿಸಬಹುದಾದ ಖಾಲಿ ಹುದ್ದೆಗಳನ್ನು ಮೊದಲೇ ಅಂದಾಜಿಸಿ, ಅದರ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಬೇಕು.

  • ಹೆಚ್ಚುವರಿ ಆಯ್ಕೆ ಪಟ್ಟಿ: ಲಭ್ಯವಿರುವ ಅರ್ಹ ಅಭ್ಯರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ವರದಿಯಾದ ಖಾಲಿ ಹುದ್ದೆಗಳಿಗಿಂತ ಕನಿಷ್ಠ ಶೇ. 25 ರಷ್ಟು ಹೆಚ್ಚು ಅಭ್ಯರ್ಥಿಗಳನ್ನು ಒಳಗೊಂಡ ಆಯ್ಕೆ ಪಟ್ಟಿಯನ್ನು ಸಮಿತಿ ಸಿದ್ಧಪಡಿಸಬೇಕು.

  • ಗೌಪ್ಯ ವರದಿಗಳ ಸಿದ್ಧತೆ: ಇಲಾಖಾ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ತಕ್ಷಣ ಸಭೆ ನಡೆಸಬೇಕು ಮತ್ತು ಅದಕ್ಕೂ ಮುನ್ನ ನೌಕರರ ಕಾರ್ಯನಿರ್ವಹಣಾ ವರದಿಗಳನ್ನು (Confidential Reports) ನವೀಕರಿಸಿರಬೇಕು.

ಕಟ್ಟುನಿಟ್ಟಿನ ಪಾಲನೆಗೆ ಸೂಚನೆ

ಸರ್ಕಾರದ ಈ ಆದೇಶವನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಆಶಾಕುಮಾರಿ ಎ.ಜೆ. ಅವರು ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ.